×
Ad

ಬೀದರ್ ಕೇಂದ್ರ ಬಸ್‌ ನಿಲ್ದಾಣಕ್ಕೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಅವ್ಯವಸ್ಥೆ ವಿರುದ್ಧ ಅಸಮಾಧಾನ

Update: 2025-11-10 17:35 IST

ಬೀದರ್ : ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಅಲ್ಲಿನ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ದಾಣದಲ್ಲಿನ ಮಹಿಳಾ ಪ್ರಯಾಣಿಕರ ಜೊತೆ ಮಾತನಾಡಿದ ಡಾ.ನಾಗಲಕ್ಷ್ಮೀ ಚೌಧರಿ ಪ್ರಯಾಣಿಕರ ಕುಂದು ಕೊರತೆ ಆಲಿಸಿದರು. ಬಸ್ ನಿಲ್ದಾಣದಲ್ಲಿನ ಕುಡಿಯುವ ನೀರು, ಶೌಚಾಲಯ, ಸಿಸಿಟಿವಿ, ಮಗುವಿಗೆ ಹಾಲುಣಿಸುವ ಕೇಂದ್ರ ಪರಿಶೀಲನೆ ಮಾಡಿದರು.

ಬಸ್ ನಿಲ್ದಾಣದಲ್ಲಿ ತಿಂಗಳಿಂದ ಕುಡಿಯುವ ನೀರು ಬರುತ್ತಿಲ್ಲ ಎಂದು ಪ್ರಯಾಣಿಕರೊಬ್ಬರು ತಿಳಿಸಿದಾಗ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಮಗುವಿಗೆ ಹಾಲುಣಿಸುವ ಕೇಂದ್ರಕ್ಕೆ ಭೇಟಿ ನೀಡಿ, ತೊಟ್ಟಿಲಿನ ವ್ಯವಸ್ಥೆ ಇಲ್ಲ, ಎಲ್ಲಾ ಕಡೆಗೆ ಧೂಳು ತುಂಬಿದ್ದು ಈ ಸ್ಥಳದಲ್ಲಿ ಮಗುವಿಗೆ ಹಾಲುಣಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.  

ಬಸ್ ನಿಲ್ದಾಣದ ಡಿ ದರ್ಜೆ ನೌಕರರ ಸಮಸ್ಯೆ ಆಲಿಸಿದ ಅವರು ಸುಮಾರು 14 ಸಾವಿರಕ್ಕಿಂತ ಹೆಚ್ಚು ಸಂಬಳ ನೀಡಬೇಕು. ಆದರೆ 8 ಸಾವಿರ ರೂ. ಸಂಬಳ ನೀಡಲಾಗುತ್ತಿದೆ. ಅದು ಕೂಡ ಕೈಯಲ್ಲಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಸ್ ನಿಲ್ದಾಣದ ನಿರ್ವಹಣೆಗೆ ಸರಕಾರದಿಂದ ಕೋಟ್ಯಾಂತರ ರೂಪಾಯಿ ಹಣ ಬರುತ್ತದೆ. ಅರ್ಧದಷ್ಟು ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಶೌಚಾಲಯಗಳು ಕೆಟ್ಟ ವಾಸನೆ ಬರುತ್ತಿದೆ ಎಂದು ನಾಗಲಕ್ಷ್ಮೀ ಚೌಧರಿ ಆಕ್ರೋಶವನ್ನು ವ್ಯಕ್ತಪಡಿಸಿದರು.




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News