ಬೀದರ್ | ಮದ್ಯಪಾನ ಮಾಡಿ ವಾಹನ ಚಾಲನೆ : ಚಾಲಕನಿಗೆ ದಂಡ ವಿಧಿಸಿದ ನ್ಯಾಯಾಲಯ
Update: 2025-08-18 17:55 IST
ಬೀದರ್ : ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ಚಾಲಕನಿಗೆ 10 ಸಾವಿರ ರೂ. ದಂಡ ವಿಧಿಸಿ ಬಸವಕಲ್ಯಾಣ ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಚಾಲಕನ ವಿರುದ್ದ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಡ್ರಿಂಕ್ ಆಂಡ್ ಡ್ರೈವ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಚಾಲಕನಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ.
ಜನ ಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿಯಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ. ಹೆಲ್ಮೆಟ್ ಧರಿಸಿ ಪ್ರಾಣವನ್ನು ಕಾಪಾಡಿಕೊಳ್ಳಿ. ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.