ಬೀದರ್: ಮುಂಬರುವ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ನಮೋಶಿ ಅವರ ಪರವಾಗಿ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗೋರನಳ್ಳಿ ಗ್ರಾಮದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಹಾಗೂ ಘೋಡಂಪಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಶಿಕ್ಷಕರು, ಮತದಾರರು ಹಾಗೂ ಕಾಲೇಜಿನ ಸಿಬ್ಬಂದಿಯೊಂದಿಗೆ ವಿಧಾನ ಪರಿಷತ್ ಚುನಾವಣೆಯ ಮಹತ್ವ, ಶಿಕ್ಷಕರ ಪ್ರತಿನಿಧಿತ್ವ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸಿ, ಅವುಗಳ ಕುರಿತು ಮುಖಂಡರು ಹಾಗೂ ಶಿಕ್ಷಕರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಈ ವೇಳೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ನಮೋಶಿ ಅವರ ಪರವಾಗಿ ಬೆಂಬಲ ಕೋರಿ, ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸುವಂತೆ ಶಿಕ್ಷಕರು ಹಾಗೂ ಮತದಾರರಲ್ಲಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಗುರುನಾಥ್ ರಾಜಗೀರ, ಮುಖಂಡರಾದ ಶಿವಕುಮಾರ್ ಸ್ವಾಮಿ, ಉದಯಕುಮಾರ್ ತೋರಣ, ಸಂಜುಕುಮಾರ್ ರೆಡ್ಡಿ, ರಾಜಶೇಖರ್ ನೌಬಾದೆ ಹಾಗೂ ಸಿದ್ದಾರೂಢ ಭಾಲ್ಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor