ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ವಸ್ತು ಪ್ರದರ್ಶನ ಸಹಕಾರಿಯಾಗಿದೆ : ಸಿಇಓ ಡಾ.ಗಿರೀಶ್ ಬದೋಲೆ
ಬೀದರ್ : ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ತಿಳಿಸಿದರು.
ಇಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿರುವ 3 ದಿನಗಳ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಸರ್ಕಾರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಈ ವಸ್ತು ಪ್ರದರ್ಶನ ಬಹಳ ಮುಖ್ಯವಾಗಿದೆ. ಕೇಂದ್ರ ಬಸ್ ನಿಲ್ದಾಣದ ಮೂಲಕ ಪ್ರಯಾಣ ಮಾಡುವ ಸಾರ್ವಜನಿಕರು ಈ ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡುವುದರಿಂದ ಸರ್ಕಾರದ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಈ ವಸ್ತು ಪ್ರದರ್ಶನ ಮಳಿಗೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುವಂತೆ ಮಾಡಲು ನಿಲ್ದಾಣದಲ್ಲಿ ಧ್ವನಿ ವರ್ಧಕ ಅಳವಡಿಸಬೇಕು ಎಂದು ವಿಭಾಗೀಯ ಸಾರಿಗೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಾರಿ ಅಧಿಕಾರಿ ಇಂದ್ರಸೇನ್ ಎಂ.ಬಿರಾದಾರ್, ಕರ್ನಾಟಕ ರಾಜ್ಯ ಸಾರಿಗೆ ನೌಕರ ಸಂಘ ಬೀದರ್ ವಿಭಾಗದ ಜಿಲ್ಲಾಧ್ಯಕ್ಷ ಕಲ್ಲಪ್ಪ ವಣಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಕೃಷ್ಣ ಸೋಲಪುರ್, ಜಗನ್ನಾಥ್ ಜಮಾದಾರ್, ಈಶ್ವರ್ ಬಡಿಗೇರ್ ಹಾಗೂ ಅವಿನಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.