×
Ad

ಬೀದರ್‌ | ಉರುಳಿ ಬಿದ್ದ ವಿದ್ಯುತ್ ಕಂಬ : GESCOM ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

Update: 2026-06-08 17:11 IST

ಹುಲಸೂರ್ : ಗುಂಜರಗಾ ಗ್ರಾಮದ ಹೊರವಲಯದಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದು ಒಂದು ವಾರ ಕಳೆದಿದ್ದರೂ ಸಂಬಂಧಿಸಿತ ಜೇಸ್ಕಾಂ ಅಧಿಕಾರಿಗಳು ದುರಸ್ತಿ ಕಾರ್ಯ ಆರಂಭಿಸದಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಜಯಕುಮಾರ್ ಜೋಗಿರೆ, ಉರುಳಿ ಬಿದ್ದಿರುವ ಕಂಬದಿಂದ ಸಾರ್ವಜನಿಕರ ಸುರಕ್ಷತೆಗೆ ಗಂಭೀರ ಅಪಾಯ ಉಂಟಾಗುವ ಸಾಧ್ಯತೆ ಇದ್ದು, ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ ಎಂದು ಆರೋಪಿಸಿದ್ದಾರೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಉರುಳಿ ಬಿದ್ದ ಕಂಬದಿಂದ ಮತ್ತಷ್ಟು ಅವಘಡಗಳು ಸಂಭವಿಸುವ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ತಂತಿಗಳು ಹಾಗೂ ಕಂಬದ ಸ್ಥಿತಿಯಿಂದ ಜನರು ಮತ್ತು ಜಾನುವಾರುಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜೆಸ್ಕಾಂ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಉರುಳಿ ಬಿದ್ದ ವಿದ್ಯುತ್ ಕಂಬವನ್ನು ದುರಸ್ತಿ ಮಾಡಿ ಸಾರ್ವಜನಿಕರ ಸುರಕ್ಷತೆ ಹಾಗೂ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News