×
Ad

ಪಕ್ಷ ವಿರೋಧಿ ಚಟುವಟಿಕೆ ಆರೋಪ : ಬಿಜೆಪಿಯಿಂದ ಉಚ್ಛಾಟನೆಗೊಂಡ ತಂದೆ, ಮಗ

Update: 2025-10-29 14:37 IST

ಬೀದರ್ : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಸವಕಲ್ಯಾಣದ ಬಿಜೆಪಿಯ ಮಾಜಿ ಜಿಲ್ಲಾ ಕಾರ್ಯಕಾರಣಿ ಸದಸ್ಯ ಸಂಜೀವಕುಮಾರ ಸುಗುರೆ ಹಾಗೂ ಅವರ ಮಗ ಬಿಜೆಪಿಯ ಮಾಜಿ ಯುವ ಮೋರ್ಚಾದ ಅಧ್ಯಕ್ಷ ಸಾಗರ್ ಸುಗುರೆ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಬಸವಕಲ್ಯಾಣ ತಾಲೂಕಿನ ನಗರ ಮಂಡಲದ ಅಧ್ಯಕ್ಷ ಸಿದ್ದು ಎಸ್. ಬಿರಾದಾರ್ ಅವರು ಆದೇಶ ಹೊರಡಿಸಿದ್ದು, ಅನೇಕ ದಿವಸಗಳಿಂದ ಸತತವಾಗಿ ಪಕ್ಷ ವಿರೋಧ ಚಟುವಟಿಕೆಯಲ್ಲಿ ಪಾಲ್ಗೊಂಡು ಪಕ್ಷದ ಶಿಸ್ತಿಗೆ ಧಕ್ಕೆ ತರುವ ಕೆಲಸ ಮಾಡಿರುತ್ತೀರಿ. ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ತಮ್ಮಿಬ್ಬರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು (6) ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News