ಅಂತಿಮ ಮತದಾರರ ಪಟ್ಟಿ ಪ್ರಕಟ | ಬೀದರ್ ಜಿಲ್ಲೆಯಲ್ಲಿ 12,46,755 ಮತದಾರರು: ಡಿಸಿ ಶಿಲ್ಪಾ ಶರ್ಮಾ
ಶಿಲ್ಪಾ ಶರ್ಮಾ
ಬೀದರ್: ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026ರ ಅಂಗವಾಗಿ ಬೀದರ್ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅ.27ರಂದು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,46,755 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಮತಗಟ್ಟೆ ಕೇಂದ್ರಗಳು, ತಹಶೀಲ್ದಾರ್ ಕಚೇರಿಗಳು, ಸಹಾಯಕ ಆಯುಕ್ತರ ಕಚೇರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸೂಚನಾ ಫಲಕಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯ ತಲಾ ಒಂದು ಪ್ರತಿಯನ್ನು ಅನುಮೋದಿತ ರಾಜಕೀಯ ಪಕ್ಷಗಳಿಗೂ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಕಟಿತ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಜಿಲ್ಲೆಯಲ್ಲಿ 6,44,400 ಪುರುಷರು, 6,02,328 ಮಹಿಳೆಯರು ಹಾಗೂ 39 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 12,46,755 ಮತದಾರರಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,28,856 ಮತದಾರರಿದ್ದು, ಇವರಲ್ಲಿ 1,19,134 ಪುರುಷರು, 1,09,716 ಮಹಿಳೆಯರು ಹಾಗೂ 6 ತೃತೀಯ ಲಿಂಗಿಗಳಿದ್ದಾರೆ. ಹುಮನಾಬಾದ್ ಕ್ಷೇತ್ರದಲ್ಲಿ ಒಟ್ಟು 2,26,047 ಮತದಾರರಿದ್ದು, 1,16,388 ಪುರುಷರು, 1,09,651 ಮಹಿಳೆಯರು ಹಾಗೂ 8 ತೃತೀಯ ಲಿಂಗಿಗಳಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 1,86,514 ಮತದಾರರಿದ್ದು, 96,029 ಪುರುಷರು, 90,483 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳಿದ್ದಾರೆ.
ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,88,647 ಮತದಾರರಿದ್ದು, 95,579 ಪುರುಷರು, 93,056 ಮಹಿಳೆಯರು ಹಾಗೂ 12 ತೃತೀಯ ಲಿಂಗಿಗಳಿದ್ದಾರೆ. ಭಾಲ್ಕಿ ಕ್ಷೇತ್ರದಲ್ಲಿ ಒಟ್ಟು 2,15,422 ಮತದಾರರಿದ್ದು, 1,11,888 ಪುರುಷರು, 1,03,531 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳಿದ್ದಾರೆ. ಔರಾದ್ ಕ್ಷೇತ್ರದಲ್ಲಿ ಒಟ್ಟು 2,01,260 ಮತದಾರರಿದ್ದು, 1,05,376 ಪುರುಷರು ಹಾಗೂ 95,884 ಮಹಿಳಾ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.