ಔರಾದ್‌ನಲ್ಲಿ ಅಗ್ನಿ ಅವಘಡ : ಅಂಗಡಿಗಳು ಸುಟ್ಟು ಭಸ್ಮ
Update: 2026-01-10 15:43 IST
ಔರಾದ್: ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸುಮಾರು 9 ಭಾಂಡೆ ಅಂಗಡಿಗಳು, ಪಾದರಕ್ಷೆ ಅಂಗಡಿ ಹಾಗೂ ಒಂದು ಕಿರಾಣಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಅರ್ಧ ಗಂಟೆಯಲ್ಲೇ ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿದರೂ, ವಾಹನದಲ್ಲಿ ನೀರು ಇಲ್ಲದ ಕಾರಣ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ತಹಶೀಲ್ದಾರ್ ಮುಂದೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಪಾಟೀಲ್, ಸಿಪಿಐ ರಘವೀರಸಿಂಗ್ ಠಾಕೂರ್, ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಭೇಟಿ ನೀಡಿ ಪರಿಶೀಲಿಸಿದ್ದಾರೆ.