ಬೀದರ್‌ : ಪಾಟಾಕಿ ಮಾರಾಟಗಾರರು ಕಡ್ಡಾಯವಾಗಿ ಪರವಾನಿಗೆ ನೀಡಿದ ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ಸ್ಥಾಪಿಸಬೇಕು. ಸುರಕ್ಷತಾ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಪರವಾನಿಗೆ ಇಲ್ಲದೇ ಬೇರೆ ಅಂಗಡಿಗಳಲ್ಲಿ ಪಟಾಕಿ ಮಾರಾಟ ಹಾಗೂ ಶೇಖರಣೆ ಮಾಡತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯಲ್ಲಿ ಪಟಾಕಿ ಮಾರಾಟಗಾರರ ಮಳಿಗೆಗಳ ಸ್ಥಾಪನೆ, ಸ್ಥಳ ಪರಿಶೀಲನೆ ಹಾಗೂ ಮುನ್ನೆಚ್ಚರಿಕೆ ಕ್ರಮ ಕುರಿತಂತೆ ನಡೆಸಿದ ಪಟಾಕಿ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿರಾಣಿ ಅಂಗಡಿಗಳು ಮತ್ತು ಇನ್ನಿತರೆ ಸ್ಥಳಗಳಲ್ಲಿ ಪರವಾನಿಗೆ ಇಲ್ಲದೇ ಪಟಾಕಿ ದಾಸ್ತಾನು ಮಾಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಅನಾಹುತಗಳು ಸಂಭವಿಸದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಪ್ರದೀಪ್ ಗುಂಟಿ, ಸಹಾಯಕ ಆಯುಕ್ತ ಅಭಿನವ್ ಜೈನ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿ ಮುಜಾಮಿಲ್ ಸೇರಿದಂತೆ ವಿವಿಧ ತಾಲೂಕಿಗಳ ತಹಶೀಲ್ದಾರರು ಹಾಗೂ ಪಟಾಕಿ ಮರಾಟಗಾರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor