ಬೀದರ್| ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ; ಆರೋಪಿಯ ಬಂಧನ
Update: 2025-06-18 21:00 IST
ಬೀದರ್: ನಗರದ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಇರಾನಿ ಗಲ್ಲಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಯಿಂದ 300 ರೂ. ನಗದು ಹಾಗೂ 20,0800 ರೂ. ಮೌಲ್ಯದ 2.8 ಕೆ.ಜಿ ತೂಕದ ಗಾಂಜಾ ವಶಕ್ಕೆ ಪಡೆದಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಈ ಪ್ರಕರಣದ ವಿರುದ್ಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.