×
Ad

Bidar | ಗಾಂಜಾ ಸಾಗಾಟ: ನಾಲ್ವರು ಆರೋಪಿಗಳ ಬಂಧನ

Update: 2026-03-06 21:34 IST

ಬೀದರ್: ಗಾಂಧಿ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕಮಠಾಣಾ-ಬೀದರ್ ರಸ್ತೆಯ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಾಂಧಿ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕಮಠಾಣಾ-ಬೀದರ್ ರಸ್ತೆಯ ಸ್ವಿಮಿಂಗ್ ಪೂಲ್ ಹತ್ತಿರ ಸುಮಾರು 4 ಲಕ್ಷ 46 ಸಾವಿರ ರೂ. ಬೆಲೆಯುಳ್ಳ ಒಟ್ಟು 8 ಕೆಜಿ 920 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಸಾಗಿಸಲು ಬಳಸಿದ ಸುಮಾರು 2 ಲಕ್ಷ ರೂ. ಬೆಲೆ ಬಾಳುವ ಮಾರುತಿ ಸುಜುಕಿ ಕಾರು ವಶಕ್ಕೆ ಪಡೆಯಲಾಗಿದೆ.

ಗುರುವಾರ ಸಾಯಂಕಾಲ ಕಮಠಾಣ ಕಡೆಯಿಂದ ಅಕ್ರಮವಾಗಿ ಗಾಂಜಾ ಬೀದರ್ ಕಡೆಗೆ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ. ಗಾಂಜಾ ಹಾಗೂ ಅದನ್ನು ಸಾಗಿಸಲು ಬಳಸಿದ ಕಾರು ವಶಕ್ಕೆ ಪಡೆದು ನಾಲ್ಕು ಜನ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

ಈ ಘಟನೆ ಕುರಿತು ನಗರದ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News