ಗಿಟ್ಟೆ ಮಾಧವ್ ವಿಠ್ಠಲರಾವ್

ಬೀದರ್: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಗಿಟ್ಟೆ ಮಾಧವ್ ವಿಠ್ಠಲರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಆಗಿ ಡಾ.ಗಿರೀಶ್ ದಿಲೀಪ್ ಬದೋಲೆ ಅವರು ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರ ಸ್ಥಾನಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಿಟ್ಟೆ ಮಾಧವ್ ವಿಠ್ಠಲರಾವ್ ಅವರನ್ನು ನೇಮಕ ಮಾಡಲಾಗಿದೆ.

ಸರ್ಕಾರದ ಆದೇಶದಂತೆ ಗಿಟ್ಟೆ ಮಾಧವ್ ವಿಠ್ಠಲರಾವ್ ಅವರು ಬೀದರ್ ಜಿಲ್ಲಾ ಪಂಚಾಯತ್‌ನ ನೂತನ ಸಿಇಒ ಆಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor