×
Ad

ಅತಿವೃಷ್ಟಿ : ಬೀದರ್ ಜಿಲ್ಲೆಗೆ 100 ಕೋಟಿ ರೂ. ಪರಿಹಾರಕ್ಕೆ ಸಿ.ಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್ ಖಂಡ್ರೆ ಮನವಿ

Update: 2025-08-30 22:11 IST

ಬೀದರ್ : ಜಿಲ್ಲಾದ್ಯಂತ ಆಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆಯಾಗಿ ಜನರ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, 100 ಕೋಟಿ ರೂ. ವಿಶೇಷ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಇಂದು ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಸೋಯಾ, ತೊಗರಿ ಸೇರಿದಂತೆ ಹಲವು ಬೆಳೆ ನಾಶವಾಗಿದೆ. ನೂರಾರು ಮನೆಗಳು ಹಾನಿಗೊಳಗಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯವೂ ನೀರು ಪಾಲಾಗಿದೆ. ಕೆಲವು ಸಂಪರ್ಕ ಸೇತುವೆಗಳು ಕೊಚ್ಚಿಹೋಗಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಕಡಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ನಿಯಮಾವಳಿಯಂತೆ ಸಮೀಕ್ಷೆ ನಡೆಸಿದ್ದು, ಪ್ರಾಥಮಿಕ ಅಂದಾಜಿನಂತೆ ಸುಮಾರು 500 ಕೋಟಿ ರೂ. ನಷ್ಟ ಸಂಭವಿಸಿದೆ. ಮೊದಲೇ ಹಿಂದುಳಿದಿರುವ ಬೀದರ್ ಜಿಲ್ಲೆ ಈ ಅನಾಹುತಕಾರಿ ಮಳೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲೆಯ ರೈತರು, ಬಡಜನರು, ಕೂಲಿ ಕಾರ್ಮಿಕರು ಆಂತಕದಲ್ಲಿ ಕಾಲ ಕಳೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ನೊಂದ ಜನರ ನೆರವಿಗೆ ಬರುವಂತೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News