×
Ad

ಹೂಲಸೂರ್‌ | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

Update: 2026-07-02 18:57 IST

ಹೂಲಸೂರ್: ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ರಾಜಪ್ಪ ಭ್ರಹಮಶೇಟೆ (55) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.

ರಾಜಪ್ಪ ಅವರು ಕೆನರಾ ಬ್ಯಾಂಕ್‌ನಲ್ಲಿ 1.80 ಲಕ್ಷ ರೂ. ಸಾಲ ಪಡೆದಿದ್ದು, ಇದಲ್ಲದೆ ಖಾಸಗಿ ಸಾಲವನ್ನೂ ಮಾಡಿದ್ದರು. ಸಾಲದ ಒತ್ತಡದಿಂದ ಮನನೊಂದ ಅವರು ಗುರುವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ರೈತನಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ ಇದ್ದಾರೆ. ಕಳೆದ ವರ್ಷ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಕುಟುಂಬ ಈಗ ಮತ್ತೊಂದು ಆಘಾತಕ್ಕೆ ಒಳಗಾಗಿದೆ.

ಮೃತದೇಹವನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಹೂಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News