×
Ad

ಔರಾದ್ (ಬಿ) ನಲ್ಲಿ ನಡೆದ ಆರೆಸ್ಸೆಸ್‌ ಪಥ ಸಂಚಲನದಲ್ಲಿ ವಸತಿ ನಿಲಯದ ಅಡುಗೆ ಸಹಾಯಕ ಭಾಗಿ : ವಿಡಿಯೋ ವೈರಲ್

Update: 2025-10-27 17:38 IST

ಬೀದರ್ : ಇತ್ತೀಚಿಗೆ ಔರಾದ್ (ಬಿ) ಪಟ್ಟಣದಲ್ಲಿ ನಡೆದ ಆರೆಸ್ಸೆಸ್‌ ಪಥ ಸಂಚಲನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ವಸತಿ ನಿಲಯದ ಅಡುಗೆ ಸಹಾಯಕ ಭಾಗಿಯಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

ವಿಜಯಕುಮಾರ್ ಎನ್ನುವವರು ಔರಾದ್ ತಾಲೂಕಿನ ಸಂತಪುರ್ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ್ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಸರ್ಕಾರಿ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿಗೆ ಔರಾದ್ ನಲ್ಲಿ ನಡೆದ ಆರೆಸ್ಸೆಸ್‌ ಪಥ ಸಂಚಲನದಲ್ಲಿ ಭಾಗಿಯಾಗಿರುವ ವಿಡಿಯೋ ವೈರಲ್ ಆಗಿದೆ.

ಕೆಲ ದಿನಗಳ ಹಿಂದೆ ಬಸವಕಲ್ಯಾಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಹೊರ ಸಂಪನ್ಮೂಲದಿಂದ ಅಡುಗೆ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿರುವ ಪ್ರಮೋದ್ ಎಂಬಾತನನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಅದೇ ಇಲಾಖೆಯ ಖಾಯಂ ಹುದ್ದೆಯಲ್ಲಿರುವ ಅಡುಗೆ ಸಹಾಯಕ ವಿಜಯಕುಮಾರ್ ಅವರು ಆರೆಸ್ಸೆಸ್‌ ಪಥ ಸಂಚಲನದಲ್ಲಿ ಭಾಗಿಯಾಗಿದ ವಿಡಿಯೋ ವೈರಲ್ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News