×
Ad

ಹುಲಸೂರು | ಸಾಲಬಾಧೆ ತಾಳದೆ ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Update: 2026-03-03 21:24 IST

ಹುಲಸೂರು: ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದ ರೈತರೊಬ್ಬರು ಸಾಲಬಾಧೆ ತಾಳದೆ ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ.

ಮೆಹಕರ್ ಗ್ರಾಮದ ನಿವಾಸಿ ವಿಷ್ಣುಕಾಂತ್ ಹಿಲಾಪೂರೆ (40) ಮೃತ ರೈತರು. ಫೆಬ್ರವರಿ 28ರಂದು ಬೆಳಿಗ್ಗೆ ಹೊಲಕ್ಕೆ ತೆರಳಿದ್ದ ಅವರು, ಸಂಜೆ ವೇಳೆಗೆ ಹೊಲದಲ್ಲಿನ ಶೆಡ್‌ನಲ್ಲಿ ಕೀಟನಾಶಕ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ತಕ್ಷಣ ಅವರನ್ನು ಹುಲಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಬೀದರ್ ನಗರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ (ಮಾ.3)ರಂದು ಮೃತಪಟ್ಟಿದ್ದಾರೆ.

ವಿಷ್ಣುಕಾಂತ್ ತಮ್ಮ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ವಿವಿಧ ಬ್ಯಾಂಕ್‌ಗಳು ಮತ್ತು ಖಾಸಗಿ ಸಂಘಗಳಿಂದ ಪಡೆದಿದ್ದ ಕೃಷಿ ಸಾಲ ತೀರಿಸಲು ಸಾಧ್ಯವಾಗದೇ ಬಡ್ಡಿ ಹೆಚ್ಚಾಗುತ್ತಿತ್ತು. ಬೆಳೆ ಸರಿಯಾಗಿ ಬಾರದ ಕಾರಣ ಸಾಲದ ಒತ್ತಡ ಹೆಚ್ಚಾಗಿ ಮನನೊಂದು ಆತಂಕದಲ್ಲಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News