ಹುಲಸೂರ್ | ಶಿವಣಿ ಗ್ರಾಮದಲ್ಲಿ ಮೊಸಳೆ ಪತ್ತೆ : ಗ್ರಾಮಸ್ಥರಲ್ಲಿ ಆತಂಕ
ಹುಲಸೂರ್: ಶಿವಣಿ ಗ್ರಾಮದ ಸಿದ್ರಾಮ್ ಪಾರಶೆಟ್ಟೆ ಅವರ ಕಬ್ಬಿನ ಹೊಲದಲ್ಲಿ ಮೊಸಳೆಯೊಂದು ಕಾಣಿಸಿಕೊಂಡ ಘಟನೆ ನಡೆದಿದೆ. ಇದರಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕಬ್ಬಿನ ಹೊಲದಲ್ಲಿ ಮೊಸಳೆ ಇರುವುದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್‌ಎಫ್‌ಒ ಸಚಿನ್ ಪಾಟೀಲ್, ಡಿವೈಆರ್‌ಎಫ್‌ಒ ಶಾಂತಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಮೊಸಳೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಭಗವಾನ್ ಹಾಗೂ ಶರಣು ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿದ್ದರು. ಕಬ್ಬಿನ ಹೊಲದಲ್ಲಿ ಮೊಸಳೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈತರು ಹಾಗೂ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು.
ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆಯನ್ನು ಸುರಕ್ಷಿತವಾಗಿ ನಿಯಂತ್ರಿಸುವ ಕಾರ್ಯ ಕೈಗೊಂಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು.