ಹುಲಸೂರ್ | ಮಂಗ ದಾಳಿ : ಇಬ್ಬರು ಮಹಿಳೆಯರಿಗೆ ಗಾಯ

Update: 2026-08-07 20:43 IST

ಸಾಂದರ್ಭಿಕ ಚಿತ್ರ

ಹುಲಸೂರ್ : ಮಂಗವೊಂದು ದಾಳಿ ನಡೆಸಿ ಕಚ್ಚಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಹುಲಸೂರ್ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಗಣೇಶ್ ನಗರ ನಿವಾಸಿ ಕವಿತಾ ಗೋಪನೆ ಹಾಗೂ ಮತ್ತೊಬ್ಬ ಮಹಿಳೆಗೆ ಗುರುವಾರ ಮತ್ತು ಶುಕ್ರವಾರ ಮಂಗ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡ ಇಬ್ಬರೂ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಂಗವನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ಇದೇ ಮಂಗ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮಕ್ಕಳು ಸೇರಿದಂತೆ 12 ಮಂದಿಗೆ ಕಚ್ಚಿ ಗಾಯಗೊಳಿಸಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೇರಿ ಮಂಗವನ್ನು ಹಿಡಿದು ಚಿಕಿತ್ಸೆ ನೀಡಿದ್ದರು. ಆದರೆ ಇದೀಗ ಮತ್ತೆ ಮಂಗನ ಅಟ್ಟಹಾಸ ಆರಂಭವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

ಮಂಗವನ್ನು ಶೀಘ್ರವಾಗಿ ಹಿಡಿದು ಜನರ ಸುರಕ್ಷತೆ ಖಚಿತಪಡಿಸಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News