×
Ad

ಹುಲಸೂರ್ | ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶನ ಪ್ರಕರಣ : ಮೂವರ ಬಂಧನ

Update: 2026-07-02 20:52 IST

ಹುಲಸೂರ್: ಶಸ್ತ್ರಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿ, ವ್ಯಕ್ತಿಯೊಬ್ಬರ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಹಕರ್ ಪೊಲೀಸರು ಮೂವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.

ಶಾಜನಿ ಔರಾದ್ ಗ್ರಾಮದ ನಿವಾಸಿಗಳಾದ ಅಭಿಷೇಕ್ (22), ಸಾಗರ್ (21) ಹಾಗೂ ಗೋಟ್ಯ (22) ಬಂಧಿತರು.

ಜೂ.19ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಬೈಕ್‌ನಲ್ಲಿ ಸಂಚರಿಸುತ್ತಾ ಕೈಯಲ್ಲಿ ತಲ್ವಾರ್ ಹಿಡಿದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ್ದರು. ಈ ವೇಳೆ ಅವರನ್ನು ಪ್ರಶ್ನಿಸಿದ ಗ್ರಾಮದ ನಿವಾಸಿ ಈಶ್ವರ್ ಅಗ್ರೆ ಅವರ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆಸಿ ಕೈಗೆ ಗಾಯಗೊಳಿಸಿ ಪರಾರಿಯಾಗಿದ್ದರು.

ಈ ಸಂಬಂಧ ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ತಲ್ವಾರ್ ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News