ಹುಲಸೂರು: ಸಾಯಗಾಂವ್ ಹೋಬಳಿಯ ಗಡಿ ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿಂದ ಜಾನುವಾರುಗಳು, ಮನೆಗಳಲ್ಲಿನ ವಸ್ತುಗಳು ಹಾಗೂ ನದಿ ಪಾತ್ರದಲ್ಲಿರುವ ರೈತರ ಮೋಟಾರ್ ಮತ್ತು ವೈರ್‌ಗಳು ಕಳವಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮೇಹಕರ್ ಪೊಲೀಸ್ ಠಾಣೆಯ ಪೊಲೀಸರು ಸೂಚಿಸಿದ್ದಾರೆ.

ನೆರೆಯ ಮಹಾರಾಷ್ಟ್ರದಿಂದ ಕೆಲವರು ಬಂದು ಕಳ್ಳತನ ನಡೆಸುತ್ತಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಮನೆ ಹಾಗೂ ಜಾನುವಾರುಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮನೆಗಳನ್ನು ಖಾಲಿ ಬಿಟ್ಟು ತೆರಳುವಾಗ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದೆ. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಾಹನಗಳು ಕಂಡುಬಂದರೆ ತಕ್ಷಣ ಮೇಹಕರ್ ಪೊಲೀಸ್ ಠಾಣೆಗೆ ಅಥವಾ 112 ತುರ್ತು ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ಪಿಎಸ್ಐ ಸುದರ್ಶನ್ ರೆಡ್ಡಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor