ಹುಮನಾಬಾದ್ | ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು
Update: 2026-01-27 19:14 IST
ಹುಮನಾಬಾದ್ : ಬಸವಕಲ್ಯಾಣದಿಂದ ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಕಾರೊಂದು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ್ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ–65ರಲ್ಲಿ ಸೋಮವಾರ ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ಸಂಭವಿಸಿದೆ.
ಮೃತರನ್ನು ಚಿಕನೇಗಾಂವ್ ವಾಡಿ ನಿವಾಸಿ ವಿಶ್ವಜಿತ್ (30) ಎಂದು ಗುರುತಿಸಲಾಗಿದೆ. ಅವರು ಸೋಮವಾರ ಬಸವಕಲ್ಯಾಣದಿಂದ ಹುಮನಾಬಾದ್‌ನಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮಾರ್ಗ ಮಧ್ಯೆ ಸೇವಾ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ತೀವ್ರತೆಗೆ ಚಾಲಕ ವಿಶ್ವಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಸವಕಲ್ಯಾಣ ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದೇಶ್ವರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
.