×
Ad

ಹುಮನಾಬಾದ್ | ಬೆಳೆ ಹಾನಿ ಪ್ರದೇಶಕ್ಕೆ ವಿಧಾನ ಪರಿಷತ್ ಸದಸ್ಯರಿಂದ ಭೇಟಿ : ವರದಿ ಸಲ್ಲಿಸಲು ಸೂಚನೆ

Update: 2025-08-25 22:21 IST

ಹುಮನಾಬಾದ್ : ತಾಲೂಕಿನಲ್ಲಿ ಕೆಲ ದಿನಗಳಿಂದ ಸುರಿದ ಧಾರಕಾರ ಮಳೆಗೆ ರೈತರು ಬೆಳೆದ ಬೆಳೆ ಹಾನಿಗೀಡಾದ ಸ್ಥಳಗಳಿಗೆ ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ್ ಪಾಟೀಲ್ ಹಾಗೂ ಭೀಮರಾವ್ ಪಾಟೀಲ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಕಪ್ಪರಗಾಂವ್, ವರವಟ್ಟಿ (ಕೆ) ಹಾಗೂ ಶೇಡೋಳ್ ಗ್ರಾಮ ಸೇರಿ ನಾನಾ ಗ್ರಾಮಗಳ ಹೊಲಗಳಿಗೆ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಹಾಗೂ ಭೀಮರಾವ್ ಪಾಟೀಲ್ ಅವರು ಭೇಟಿ ನೀಡಿ ವಾಸ್ತವವಾಗಿ ಹಾಳಾಗಿರುವ ಬೆಳೆ ವೀಕ್ಷಣೆ ಮಾಡಿದರು.

ಬೆಳೆ ಹಾನಿ ಕುರಿತು ತೋಟಗಾರಿಕೆ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಂದ ಮಾಹಿತಿ ಪಡೆದುಕೊಂಡರು. ನಿರಂತರವಾಗಿ ಸುರಿದ ಮಳೆಗೆ ತಾಲೂಕು ವ್ಯಾಪ್ತಿಯಲ್ಲಿ ಸಮೃದ್ಧವಾಗಿ ಬೆಳೆ ಹಾನಿ, ಮನೆ ಕುಸಿತ, ಜಾನುವಾರಗಳ ಕುರಿತು ಸಮರ್ಪಕವಾಗಿ ಸಮೀಕ್ಷೆ ಮಾಡುವ ಮೂಲಕ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅಧಿಕಾರಿಗಳಿಂದ ವರದಿ ಪಡೆದು ಸಂತ್ರಸ್ತರಿಗೆ ಸರಕಾರದಿಂದ ಪರಿಹಾರ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಅಂಜುಮ್ ತಬಸುಮ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅಫ್ಸರಮಿಯ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಓಂಕಾರ್ ತುಂಬಾ, ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ್ ಭೋಜಗುಂಡಿ ಹಾಗೂ ಪ್ರಭು ನೇಳಗಿ ಸೇರಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News