ಹುಮನಾಬಾದ್: ಕ್ಷೇತ್ರದ ಓತಗಿ ಗ್ರಾಮದ ರೈತ ಮುಖಂಡ ಗೋವಿಂದ ಬೀರಪ್ಪ ಅವರಿಗೆ ಸೇರಿದ ಸುಮಾರು 15 ಎಕರೆ ಕಬ್ಬಿನ ಬೆಳೆ ಶುಕ್ರವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಡಾ. ಸಿದ್ದು ಪಾಟೀಲ್ ಅವರು ತಕ್ಷಣ ಓತಗಿ ಗ್ರಾಮಕ್ಕೆ ಭೇಟಿ ನೀಡಿ, ಬೆಂಕಿಗಾಹುತಿಯಾದ ಕಬ್ಬಿನ ಜಮೀನನ್ನು ಪರಿಶೀಲಿಸಿದರು.

ಈ ವೇಳೆ ರೈತರಿಗೆ ಸಾಂತ್ವನ ಹೇಳಿದ ಶಾಸಕರು, ಸ್ಥಳದಿಂದಲೇ ತಾಲೂಕು ಮತ್ತು ಜಿಲ್ಲಾ ಕಂದಾಯ ಅಧಿಕಾರಿಗಳು ಹಾಗೂ ಜೆಸ್ಕಾಂ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಬೆಳೆ ಹಾನಿಯ ಸಮೀಕ್ಷೆ ನಡೆಸಿ, ಆದಷ್ಟು ಬೇಗ ರೈತನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು.

ಅಲ್ಲದೆ, ಬೆಂಕಿಯಿಂದ ಭಾಗಶಃ ಹಾನಿಗೊಳಗಾದ ಕಬ್ಬನ್ನು ಕೂಡಲೇ ಕಟಾವು ಮಾಡಿ ಸಾಗಿಸಲು ಖಾಸಗಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅಗತ್ಯ ವ್ಯವಸ್ಥೆ ಕಲ್ಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor