ಹುಮನಾಬಾದ್ | ಬೈಕ್-ಸ್ಕೂಟಿ ಢಿಕ್ಕಿ : ಮೂವರಿಗೆ ಗಾಯ

Update: 2026-08-22 17:19 IST

ಹುಮನಾಬಾದ್: ತಾಲೂಕಿನ ದುಬಲಗುಂಡಿ ಗ್ರಾಮದ ಹುಮನಾಬಾದ್–ಭಾಲ್ಕಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡಿದ್ದಾರೆ.

ಹುಮನಾಬಾದ್–ಭಾಲ್ಕಿ ರಸ್ತೆಯ ಅರ್ಧ ಭಾಗದ ಕಾಮಗಾರಿ ಮಾತ್ರ ಪೂರ್ಣಗೊಂಡಿದ್ದು, ಉಳಿದ ರಸ್ತೆ ಕಚ್ಚಾ ಸ್ಥಿತಿಯಲ್ಲಿದೆ. ರಸ್ತೆ ಹದಗೆಟ್ಟಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಭಾಲ್ಕಿ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಒಬ್ಬ ಮಹಿಳೆ ಸ್ಕೂಟಿಯಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಎರಡು ವಾಹನಗಳ ಸವಾರರಿಗೆ ಗಾಯಗಳಾಗಿದ್ದು, ಬೈಕ್ ಮತ್ತು ಸ್ಕೂಟಿ ಎರಡೂ ಜಖಂಗೊಂಡಿವೆ.

ಗಾಯಾಳುಗಳಿಗೆ ದುಬಲಗುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೀದರ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ರಸ್ತೆ ಕಾಮಗಾರಿ ಡಾಂಬರ್ ದರ ಹೆಚ್ಚಳದ ಕಾರಣ ಅರ್ಧದಲ್ಲೇ ಸ್ಥಗಿತಗೊಂಡಿದೆ ಎಂಬ ಬಗ್ಗೆ ಈ ಹಿಂದೆ ವರದಿ ಪ್ರಕಟವಾಗಿದ್ದರೂ ಅಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಅಪಘಾತಗಳು ಮುಂದುವರಿಯುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News