ಹುಮನಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆಯ ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ ಡಾ. ಸಿದ್ದು ಪಾಟೀಲ ಕರೆ ನೀಡಿದರು.

ತಾಲೂಕಿನ ಧಾರ್ಮಿಕ ಕ್ಷೇತ್ರವಾದ ಮಾಣಿಕನಗರದ ಸಂಗಮ ಸ್ಥಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾನುವಾರ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಯುವಜನತೆ ಹಾಗೂ ವಿದ್ಯಾರ್ಥಿ ಸಮುದಾಯ ಇಂತಹ ಸಾಮಾಜಿಕ ಜಾಗೃತಿ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಸ್ವಚ್ಛತೆಯ ಸಂದೇಶ ಪ್ರತಿ ಮನೆ-ಮನ ತಲುಪಿ, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಅನಿಲ್ ಪಸರ್ಗಿ, ಪ್ರಧಾನ ಕಾರ್ಯದರ್ಶಿ ರವಿ ಹೊಸಳ್ಳಿ, ಗೋಪಾಲಕೃಷ್ಣ ಮೊಹಳೆ, ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಾಗಭೂಷಣ ಸಂಗಮ್, ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ರಮೇಶ್ ಕಲ್ಲೂರ್, ಮುಖಂಡರಾದ ಮಲ್ಲಿಕಾರ್ಜುನ್ ಸಿಗಿ, ಗಿರೀಶ್ ತುಂಬಾ, ಕಿಶೋರ್ ನಟ್ಟಿ, ರಾಜಕುಮಾರ್ ನಿಮಾನೆ ಹಾಗೂ ಗೋಪಾಲರೆಡ್ಡಿ ಜಲಸಿಂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor