ಹುಮನಾಬಾದ್: ಸಾಮಾಜಿಕ ನ್ಯಾಯ ಹಾಗೂ ಏಕತೆಗಾಗಿ ಹೋರಾಡಿದ ದಾಸಶ್ರೇಷ್ಠ ಭಕ್ತ ಕನಕದಾಸರ ಆದರ್ಶ ಮೌಲ್ಯಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹೇಳಿದರು.

ಪಟ್ಟಣದ ಐತಿಹಾಸಿಕ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗೊಂಡ ಸಮಾಜದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳಬೇಕು, ಏಕತೆ ನೆಲೆಸಬೇಕು ಎಂಬುದು ಕನಕದಾಸರ ಆಶಯವಾಗಿತ್ತು. ಈ ವಿಚಾರಗಳನ್ನು ಅವರ ಕೃತಿಗಳು ಹಾಗೂ ಕಾವ್ಯಗಳಲ್ಲಿ ಇಂದಿಗೂ ಕಾಣಬಹುದು. ಅವರು ಪ್ರತಿಪಾದಿಸಿದ ಆದರ್ಶ ಮೌಲ್ಯಗಳನ್ನು ನಾವೆಲ್ಲರೂ ಅನುಸರಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ್, ಜಿಪಂ ಮಾಜಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ್, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಓಂಕಾರ್ ತುಂಬಾ, ಮಾಣಿಕರಾವ್ ಬೆಳಕೇರಾ, ಸತೀಷ್ ರಾಂಪೂರೆ, ವಿಠಲ್ ಡಾವರಗಾಂವ್, ಪ್ರಕಾಶ್ ಕಾಡಗೊಂಡ, ತಾನಾಜಿ ಪಾಟೀಲ್, ನಾಗರಾಜ್ ಭೋಜಗುಂಡಿ, ಶಿವಕುಮಾರ್ ಬೆಳಕೇರಾ, ಅಶೋಕ್ ಸೊಂಡೆ, ಸಂಜೀವಕುಮಾರ್ ವಡ್ಡನಕೇರಾ, ಗುಂಡಪ್ಪ ಹೊನ್ನಿಕೇರಿ, ಸಚೀನ್ ದಾಡಗಿ, ಮಲ್ಲಿಕಾರ್ಜುನ್ ಇಟಗಿ, ಪ್ರಭು ನೆಳಗಿ, ವೈಜಿನಾಥ್ ಡಾಂಗೆ, ಉಮೇಶ್ ದಾಡಗಿ, ಅರುಣ ಮಾಳಗೊಂಡ ಹಾಗೂ ಮಲ್ಲಿಕಾರ್ಜುನ್ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ