×
Ad

ಶರಣರು ಹೇಳಿದ ದಾರಿಯಲ್ಲಿ ಸಾಗಿದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ : ಶಿವಕುಮಾರ್ ಶೀಲವಂತ್

Update: 2025-01-21 18:54 IST

ಬೀದರ್ : ಶರಣರು ಹೇಳಿದ ದಾರಿಯಲ್ಲಿ ನಾವು ಸಾಗಿದಾಗ ಮಾತ್ರ ನಮ್ಮ ಹಾಗೂ ಸಮಾಜ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ಹೇಳಿದರು.

ಇಂದು ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬಿಗರ ಚೌಡಯ್ಯ ಹಾಗೂ ನಾವು ಎಲ್ಲಾ ಶರಣು ಬರೆದ ವಚನಗಳಲ್ಲಿನ ಮಹತ್ವವನ್ನು ಅರಿಯಬೇಕು. ಸಮಾಜ ಅಭಿವೃದ್ಧಿಯಾಗಬೇಕು ಎಂದರೆ ಏನು ಮಾಡಬೇಕು ಎನ್ನುವ ವಿಚಾರ ಮಾಡುವಂತಹ ನಾಗರಿಕರು ನಾವು ಆಗಬೇಕಿದೆ. ನಮ್ಮಿಂದ ಸಾಧ್ಯವಾದಷ್ಟು ಅಸಹಾಯಕರಿಗೆ ಸಹಾಯ ಮಾಡಬೇಕು ಎಂದು ಅವರು ತಿಳಿಸಿದರು.

ನಿಜ ಶರಣ ಅಂಬಿಗರ ಚೌಡಯ್ಯ ಭವನಕ್ಕಾಗಿ ನಿವೇಶನ ಮಂಜೂರು ಮಾಡುವಂತೆ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಗಿದ್ದು, ಈ ಕುರಿತು ಪರಿಶೀಲನೆ ನಡೆಸಿ ಆದಷ್ಟು ಶೀಘ್ರದಲ್ಲಿ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಸವ ಮಹಾಮನೆ ಟ್ರಸ್ಟ್ ನ ಅಧ್ಯಕ್ಷ ಸಿದ್ದರಾಮ ಶರಣ ಬೆಲ್ದಾಳ್ ಅವರು ವಿಶೇಷ ಉಪನ್ಯಾಸ ನೀಡಿ, ಅಂಬಿಗರ ಚೌಡಯ್ಯ ನವರ ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳನ್ನು ನ್ಯಾಯ, ನಿಷ್ಠುರದ ಮೂಲಕ ಖಂಡಿಸಿ ಸಮಾಜದಲ್ಲಿ ಮೌಲ್ಯ ಬಿತ್ತುವ ಕೆಲಸ ಮಾಡಿದ್ದಾರೆ. ಸಮಾಜದ ಬಂಧುಗಳು ದುರಭ್ಯಾಸಗಳಿಗೆ ಬಲಿಯಾಗಬಾರದು. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾಜದ ಮುಖಂಡ ನಾರಾಯಣರಾವ ಭಂಗಿ ಮಾತನಾಡಿ, ಸಮಾಜದ ಅಭಿವೃದ್ಧಿಯಾಗಬೇಕಾದರೆ ಕಾಯಕ ಮಾಡಬೇಕು. ಒಳ್ಳೆಯ ಶಿಕ್ಷಣ ಪಡೆಯಬೇಕು. ದುಂದು ವೆಚ್ಚ ಮಾಡದೆ, ಒಗ್ಗಟ್ಟಾಗಿರಬೇಕು ನುಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಟೋಕರಿ ಕೋಳಿ ಸಮಾಜದ ಅಧ್ಯಕ್ಷ ಜಗನ್ನಾಥ್ ಜಮಾದಾರ್, ಉಪಾಧ್ಯಕ್ಷ ಸುನೀಲ್ ಖಾಶಂಪುr, ನಿಜಶರಣ ಅಂಬಿಗರ ಚೌಡಯ್ಯ ಯುವ ಸೇನೆ ಅಧ್ಯಕ್ಷ ಸುನೀಲ್ ಭಾವಿಕಟ್ಟಿ, ಶ್ರೀಕಾಂತ್ ಬಿ. ಕೋಲಿ, ಚಂದ್ರಕಾಂtb ಹಳ್ಳಿಖೇಡಕರ್, ಷಣ್ಮುಖಪ್ಪಾ ಶೇಖಪೂರ್, ಶರಣಪ್ಪಾ ಅಣ್ಣಾಜಿ ಹಾಗೂ ಗೋವಿಂದ್ ಜಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News