ಎಂಬಿಬಿಎಸ್ ವೈದ್ಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ
Update: 2025-03-01 17:29 IST
ಬೀದರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದಲ್ಲಿ ಖಾಲಿ ಇರುವ ಎಂಬಿಬಿಎಸ್ ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿದೆ.
ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಫೆ.2 ರಂದು ಸಂದರ್ಶನ ಮಾಡುವ ಮೂಲಕ ಮೆರಿಟ್ ಹಾಗೂ ಸಂದರ್ಶನದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕಕ್ಕೆ ಪ್ರಕಟಿಸಲಾಗಿದೆ.
ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಬಯಸುವವರು ಮಾ.7 ರ ಸಂಜೆ 5 ಗಂಟೆಯವರೆಗೆ ತಮ್ಮ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.