ಬೀದರ್: ವಿವಿಧ ಕಾಮಗಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಅವರಿಂದ ಶಿಲಾನ್ಯಾಸ
ಬೀದರ್: ಭಾಲ್ಕಿ-ಭಾತಂಬ್ರಾ ಮಾರ್ಗದ ರಾಷ್ಟ್ರೀಯ ಹೆದ್ದಾರಿಯ ಮರು ಡಾಂಬರೀಕರಣ ಕಾಮಗಾರಿಗೆ 2.75 ಕೋಟಿ ರೂ. ಹಾಗೂ ಭಾತಂಬ್ರಾ ಗ್ರಾಮದ ಓಣಿಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ 2.50 ಕೋಟಿ ರೂ. ಹೀಗೆ ಒಟ್ಟು ಸುಮಾರು 5.25 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇಂದು ಈ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಸ್ತೆ ಸ್ವಲ್ಪ ಹಾಳಾಗಿರುವ ಹಂತದಲ್ಲೇ ಮರುಡಾಂಬರೀಕರಣ ಕಾಮಗಾರಿ ಕೈಗೊಂಡಿದ್ದೇವೆ. ಇದರಿಂದ ವಾಹನ ಸಂಚಾರ ಸುಗಮವಾಗುತ್ತಿದ್ದು, ಅಪಘಾತ ಪ್ರಕರಣಗಳು ಕಡಿಮೆಯಾಗಲಿವೆ ಎಂದರು.
ಭಾಲ್ಕಿ ತಾಲೂಕಿನಾದ್ಯಂತ ಈಗಾಗಲೇ ಹೈವೆ ಮಾದರಿಯಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳು ನಿರ್ಮಾಣವಾಗಿವೆ. ಉಳಿದ ಪ್ರದೇಶಗಳಲ್ಲೂ ಕಾಮಗಾರಿಗಳು ಪ್ರಗತಿಯಲ್ಲಿವೆ. ನಮ್ಮ ಭಾಲ್ಕಿ ತಾಲೂಕು ಇಡೀ ಕಲ್ಯಾಣ ಕರ್ನಾಟಕದಲ್ಲಿ ಮಾದರಿ ತಾಲೂಕಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.