ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರ ಧ್ವಜ
Update: 2025-09-17 23:15 IST
ಬೀದರ್ : ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ದಿನದ ಅಂಗವಾಗಿ ಹಾರಿಸಲಾಗುತ್ತಿದ್ದ ರಾಷ್ಟ್ರ ಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
ನಗರದ ಅಂಬೇಡ್ಕರ್ ವೃತ್ತದ ಸಮೀಪದ ಸವಿತಾ ಸಮುದಾಯ ಭವನದಲ್ಲಿ, ಜಿಲ್ಲಾ ಸವಿತಾ ಸಮಾಜ ಸಂಘದ ವತಿಯಿಂದ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿರುವುದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ.