ಬ್ರಿಮ್ಸ್‌ನಲ್ಲಿ ಕ್ಯಾಥ್ ಲ್ಯಾಬ್ ವ್ಯವಸ್ಥೆ ಇಲ್ಲದೆ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ : ಡಾ. ಶಶಿಕಾಂತ್ ಪಾಟೀಲ್ ಆಕ್ರೋಶ
ಬೀದರ್ : ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ವ್ಯವಸ್ಥೆ ಇಲ್ಲದಿರುವುದರಿಂದ ರೋಗಿಗಳ ಚಿಕಿತ್ಸೆಗೆ ತೊಂದರೆಯಾಗುತ್ತಿದೆ ಎಂದು ಭೂಮಿಕಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕಾಂತ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಡಾ. ಶಶಿಕಾಂತ್ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಇದೆ ಎಂದು ಹೇಳಿದ್ದಾರೆ. ಆದರೆ ಅನಾರೋಗ್ಯದಲ್ಲಿದ್ದ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ, ಕ್ಯಾಥ್ ಲ್ಯಾಬ್ ಸೇವೆ ಸಿಗದೇ ಇರುವುದರಿಂದ ರೋಗಿಗಳು ಪರದಾಡುತ್ತಿದ್ದಾರೆ. ಇದರಿಂದಾಗಿ ಸಚಿವರೇ ಸುಳ್ಳು ಮಾಹಿತಿ ನೀಡಿದ್ದಾರೆಯೋ ಅಥವಾ ವೈದ್ಯರ ನಿರ್ಲಕ್ಷ್ಯ ಇದೆಯೋ ಎಂದು ಅರ್ಥ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೌಬಾದ್ ನಿವಾಸಿ ಅರುಣ್ ಯರನಳ್ಳಿಕರ್ ಅವರು ಅನಾರೋಗ್ಯದ ಕಾರಣ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಅವರಿಗೆ ಯಾವುದೇ ಚಿಕಿತ್ಸೆ ಸಿಗುತ್ತಿಲ್ಲ. ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಅಮರ್ ಸಾಗರ್, ಸೂರ್ಯಕಾಂತ್ ಸಾಧುರೆ ಹಾಗೂ ಅಂಬಾದಾಸ್ ಗಾಯಕವಾಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.