×
Ad

ಶಾಸಕ ಶರಣು ಸಲಗರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ: ಪಿಂಟು ಕಾಂಬಳೆ

Update: 2025-06-07 12:23 IST

ಪಿಂಟು ಕಾಂಬಳೆ

ಬೀದರ್ : ಬಸವಕಲ್ಯಾಣ ಶಾಸಕ ಶರಣು ಸಲಗರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ತಾಲ್ಲೂಕು ಅಧ್ಯಕ್ಷ ಪಿಂಟು ಕಾಂಬಳೆ ಅವರು ಒತ್ತಾಯಿಸಿದ್ದಾರೆ.

ಶಾಸಕ ಶರಣು ಸಲಗರ್ ಅವರು ಗೋಹತ್ಯೆ ವಿಷಯದಲ್ಲಿ ವಿನಾಕಾರಣ ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಹೆಸರು ತೆಗೆದುಕೊಂಡು, ಅವರಿಗೆ ಹಗುರವಾಗಿ ಮಾತನಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಅವರು, ಇದನ್ನು ನಾವು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಶರಣು ಸಲಗರ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳು ವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇಂದು ಬಕ್ರೀದ್ ಇರುವ ಕಾರಣ ನಾಳೆ ಪೊಲೀಸ್ ಅಧಿಕಾರಿಗಳು ಶಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಒಂದು ವೇಳೆ ಪೊಲೀಸ್ ಅಧಿಕಾರಿಗಳು ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದೆ ಅವರನ್ನು ಬಂಧನ ಮಾಡದಿದ್ದಲ್ಲಿ ಬಸವಕಲ್ಯಾಣ ನಗರವನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News