ಬೀದರ್ : ಕೆಇಎ ಮೂಲಕ 2026–27ನೇ ಸಾಲಿನ ಅಂತಿಮ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿದಿರುವ ಬಿ.ಎಸ್ಸಿ. (ನರ್ಸಿಂಗ್) ಕೋರ್ಸ್‌ನ ಮೂರು ಸರ್ಕಾರಿ ಸೀಟುಗಳನ್ನು ಭರ್ತಿ ಮಾಡಲು ಅಕ್ಟೋಬರ್ 30ರಂದು ವಾಕ್‌-ಇನ್ ಆಫ್‌ಲೈನ್ ಕೌನ್ಸೆಲಿಂಗ್ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ರಾಜಕುಮಾರ್ ಮಾಳಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರ ಆದೇಶದಂತೆ ಈ ಸೀಟುಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಶುಶ್ರೂಷ ಮಹಾವಿದ್ಯಾಲಯಕ್ಕೆ ಎಲ್ಲಾ ಮೂಲ ದಾಖಲೆಗಳು ಹಾಗೂ ಅವುಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ನೇರವಾಗಿ ಹಾಜರಾಗಬೇಕು ಎಂದು ಅವರು ಕೋರಿದ್ದಾರೆ.

ಕೆಇಎ ವತಿಯಿಂದ ದಾಖಲಾತಿ ಪರಿಶೀಲನೆ ಮಾಡಿಸಿಕೊಂಡು ಪರಿಶೀಲನಾ ಸ್ಲಿಪ್ ಪಡೆದಿರುವ ಅರ್ಹ ಅಭ್ಯರ್ಥಿಗಳು ಹಾಗೂ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಕೆಇಎ ಮೂಲಕ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು ಮಾತ್ರ ಈ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor