ಜು.6ರಂದು ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಜಿಲ್ಲೆ ಪ್ರವಾಸ
Update: 2026-07-04 19:23 IST
ಸಿಎಂ ಡಿ.ಕೆ.ಶಿವಕುಮಾರ್
ಬೀದರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 6ರಂದು ಬೀದರ್ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದು, ಬಸವಕಲ್ಯಾಣದ ನೂತನ ಅನುಭವ ಮಂಟಪಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 2.30ಕ್ಕೆ ಬೀದರ್‌ಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಧ್ಯಾಹ್ನ 3.40ಕ್ಕೆ ಬಸವಕಲ್ಯಾಣಕ್ಕೆ ತೆರಳಿ ನೂತನ ಅನುಭವ ಮಂಟಪಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಲಿದ್ದಾರೆ.
ನಂತರ ಸಂಜೆ 7 ಗಂಟೆಗೆ ಬೀದರ್ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.