ಬೀದರ್ | ಪೋಕ್ಸೊ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ಸಾಂದರ್ಭಿಕ ಚಿತ್ರ
ಬೀದರ್ : ಪೋಕ್ಸೊ ಪ್ರಕರಣವೊಂದರಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿ ಬಸವಕಲ್ಯಾಣದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
2022 ನೇ ಸಾಲಿನಲ್ಲಿ ಜಿಲ್ಲೆಯ ಹುಮನಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜಲಸಂಗಿ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಂದಿನ ಪಿಎಸ್ಐ ಮಂಜನಗೌಡ ಪಾಟೀಲ್ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ತನಿಖೆಯನ್ನು ಹುಮನಾಬಾದ್ ವೃತ ನಿರೀಕ್ಷಕ ಶರಣಬಸಪ್ಪ ಕೋಡ್ಲಾ ಅವರು ವಹಿಸಿಕೊಂಡು ಪ್ರಕರಣದ ದೋಷಾರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಕಲ್ಯಾಣದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಯಶವಂತ್ ಆರ್. ತಾವರೆ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.