Bidar | ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ (AI)
ಬೀದರ್: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ, 30 ಸಾವಿರ ರೂ.ದಂಡ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಾರುತಿ ಡೊಂಗ್ರೆ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.
2022ರಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆ ಸಮೀಪವಿರುವ ಶೆಡ್‌ನಲ್ಲಿ ಬಾಲಕಿಯೊಬ್ಬಳಿಗೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಕುರಿತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗೆ ಇದೀಗ 20 ವರ್ಷ ಜೈಲು ಶಿಕ್ಷೆ 30 ಸಾವಿರ ರೂ ದಂಡ ವಿಧಿಸಲಾಗಿದೆ. ದಂಡ ಕೊಡಲು ತಪ್ಪಿದ್ದಲ್ಲಿ 30 ದಿವಸಗಳ ಹೆಚ್ಚುಚರಿ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ವಿಶೇಷ ಪೋಕ್ಸೊ ಸರ್ಕಾರಿ ಅಭಿಯೋಜಕ ಸಂತೋಷಕುಮಾರ್ ಟಿ.ಸಿದ್ದೇಶ್ವರ್ ಅವರು ವಾದ ಮಂಡಿಸಿದ್ದರು.