ಜವಾಹರ್ ಬಾಲ್ ಮಂಚ್ ಬೀದರ್ ಜಿಲ್ಲಾಧ್ಯಕ್ಷರಾಗಿ ಪ್ರಸನ್ನಕುಮಾರ್ ನೇಮಕ
ಬೀದರ್: ಜವಾಹರ್ ಬಾಲ್ ಮಂಚ್ ಸಂಘಟನೆಯ ಬೀದರ್ ಜಿಲ್ಲಾಧ್ಯಕ್ಷರನ್ನಾಗಿ ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಜವಾಹರ್ ಬಾಲ್ ಮಂಚ್ ರಾಷ್ಟ್ರೀಯ ಅಧ್ಯಕ್ಷ ಜಿ.ವಿ. ಹರಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್ ಅವರ ಶಿಫಾರಸ್ಸಿನ ಮೇರೆಗೆ ಜವಾಹರ್ ಬಾಲ್ ಮಂಚ್ ಕರ್ನಾಟಕ ರಾಜ್ಯಾಧ್ಯಕ್ಷ ಮೈನುದ್ದೀನ್ ಹೆಚ್.ಜೆ. ಅವರು ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಸನ್ನಕುಮಾರ್ ಅವರು ತಕ್ಷಣದಿಂದಲೇ ಜವಾಹರ್ ಬಾಲ್ ಮಂಚ್ ಸಂಘಟನೆಯ ಬೀದರ್ ಜಿಲ್ಲಾ ಘಟಕವನ್ನು ಬಲಪಡಿಸುವುದು, ಸಂಘಟನೆಯ ಚಟುವಟಿಕೆಗಳನ್ನು ಜಿಲ್ಲಾದ್ಯಂತ ವಿಸ್ತರಿಸುವುದು ಹಾಗೂ ಸ್ಥಳೀಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಸಂಘಟನೆಯನ್ನು ಶಕ್ತಿಯುತವಾಗಿ ಬೆಳೆಸುವಂತೆ ರಾಜ್ಯಾಧ್ಯಕ್ಷರು ನೇಮಕಾತಿ ಆದೇಶದಲ್ಲಿ ಸೂಚಿಸಿದ್ದಾರೆ.