ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಔರಾದ್ ತಾಲೂಕಾಧ್ಯಕ್ಷರಾಗಿ ರವಿ ಸೂರ್ಯವಂಶಿ ನೇಮಕ
ಔರಾದ್: ತಾಲೂಕಿನ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ತಾಲೂಕಾಧ್ಯಕ್ಷರಾಗಿ ರವಿ ಸೂರ್ಯವಂಶಿ ಅವರನ್ನು ನೇಮಕ ಮಾಡಲಾಗಿದೆ.
2026ರಿಂದ 2029ರವರೆಗೆ ಔರಾದ್ ತಾಲೂಕು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಮುಜಾಹಿದ್ ಪಾಶಾ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ್ ಅವರು ರವಿ ಸೂರ್ಯವಂಶಿ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.