×
Ad

'ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ ಬೀದರ್‌ನ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆ ಆಯ್ಕೆ

Update: 2025-12-12 19:21 IST

ಬೀದರ್ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ(ಕೆಬಿವಿಎ) ಯಿಂದ ನೀಡುವ 'ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ ಬೀದರ್ ನ ಶಾಹೀನ್ ಶಿಕ್ಷಣ ಸಂಸ್ಥೆ ಆಯ್ಕೆಯಾಗಿದೆ.

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ ಎ.ಬಬಲೇಶ್ವರ್ ಅವರು 2023–24ನೇ ಸಾಲಿನ ಪ್ರತಿಷ್ಠಿತ 'ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ ಆಯ್ಕೆಯಾದ ಸಂಸ್ಥೆಯ ಹೆಸರನ್ನು ಘೋಷಿಸಿದ್ದಾರೆ. ಮಕ್ಕಳ ಸಾಹಿತ್ಯ, ಶಿಕ್ಷಣ, ರಂಗಭೂಮಿ, ಸಂಸ್ಕೃತಿ ಮತ್ತು ಸಾಮಾಜಿಕ ಸೇವೆಯ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಏಳು ಪ್ರಶಸ್ತಿ ಪುರಸ್ಕೃತರಲ್ಲಿ ಬೀದರ್‌ನ ಶಾಹೀನ್ ಸಮೂಹ ಸಂಸ್ಥೆಯನ್ನು ಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ನೀಡಿದ ಮಹತ್ವದ ಕೊಡುಗೆಗಾಗಿ ಆಯ್ಕೆ ಮಾಡಲಾಗಿದೆ. ವೈವಿಧ್ಯಮಯ ಮತ್ತು ಸೌಲಭ್ಯ ವಂಚಿತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಶೈಕ್ಷಣಿಕ ಅವಕಾಶಗಳನ್ನು ಒದಗಿಸುವಲ್ಲಿನ ನಿರಂತರ ಪ್ರಯತ್ನಗಳಿಗಾಗಿ ಈ ಸಂಸ್ಥೆಯನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಡಿ.16ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ. ಅಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಸಂಪುಟ ಸಚಿವರು, ಅಧಿಕಾರಿಗಳು ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಔಪಚಾರಿಕವಾಗಿ ಗೌರವಿಸಲಾಗುತ್ತದೆ ಎಂದು ಸಂಗಮೇಶ್ ಎ.ಬಬಲೇಶ್ವರ್ ಮಾಹಿತಿ ನೀಡಿದ್ದಾರೆ.

2023–24ನೇ ಸಾಲಿನ ʼಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ ಭಾಜನರಾದ ಇತರರು:

ಮಕ್ಕಳ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪಂಡಿತ್ ರಾಮಕೃಷ್ಣ ಶಾಸ್ತ್ರಿ, ಮೈಸೂರಿನ ಬಿ. ಗೋ. ರಮೇಶ್, ಅರುಣಾ ನರೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.  

ಮಕ್ಕಳ ರಂಗಭೂಮಿಗೆ ನೀಡಿದ ಕೊಡುಗೆಗಳಿಗಾಗಿ ಬೆಂಗಳೂರಿನ ಮಾಲತೇಶ್ ಬಡಿಗೇರ್, ಶಿಕ್ಷಣ ಮತ್ತು ಲಲಿತಕಲೆಗಳಿಗೆ ನೀಡಿದ ಕೊಡುಗೆಗಳಿಗಾಗಿ ಹುಬ್ಬಳ್ಳಿಯ ಪ್ರತಾಪ್ ಆರ್. ಬಹುರೂಪಿ,  ಸಾಹಿತ್ಯ ಮತ್ತು ಸಂಸ್ಕೃತಿಗೆ ನೀಡಿದ ಕೊಡುಗೆಗಳಿಗಾಗಿ ನಾಗಸಿಂಹ ಜಿ. ರಾವ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News