×
Ad

ಎಸ್‌ಐಆರ್‌ | ಬೀದರ್‌ ಜಿಲ್ಲೆಯಲ್ಲಿ ಒಟ್ಟು 10,12,274 ಅರ್ಜಿ ವಿತರಣೆ, 1,28,052 ಅರ್ಜಿ ಸ್ವೀಕಾರ

Update: 2026-07-08 18:40 IST

ಸಾಂದರ್ಭಿಕ ಚಿತ್ರ | Photo Credit : PTI

ಬೀದರ್: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅಂಗವಾಗಿ ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,12,274 ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,28,052 ಅರ್ಜಿಗಳು ಸ್ವೀಕೃತಗೊಂಡಿವೆ ಎಂದು ಜಿಲ್ಲಾ ಚುನಾವಣಾ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕಟಣೆಯ ಪ್ರಕಾರ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ 1,78,344 ನಮೂನೆಗಳನ್ನು ವಿತರಿಸಲಾಗಿದ್ದು, 23,467 ಅರ್ಜಿಗಳು ಸ್ವೀಕೃತಗೊಂಡಿವೆ. ಹುಮನಾಬಾದ್ ಕ್ಷೇತ್ರದಲ್ಲಿ 1,88,894 ನಮೂನೆಗಳನ್ನು ವಿತರಿಸಿ 18,468 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಭಾಲ್ಕಿ ಕ್ಷೇತ್ರದಲ್ಲಿ 1,33,917 ನಮೂನೆಗಳನ್ನು ವಿತರಿಸಲಾಗಿದ್ದು, ಅತಿ ಹೆಚ್ಚು 44,353 ಅರ್ಜಿಗಳು ಸಲ್ಲಿಕೆಯಾಗಿವೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1,77,190 ನಮೂನೆಗಳನ್ನು ವಿತರಿಸಿ 14,436 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಬೀದರ್ ಕ್ಷೇತ್ರದಲ್ಲಿ 1,64,508 ನಮೂನೆಗಳ ಪೈಕಿ 13,729 ಅರ್ಜಿಗಳು ಸ್ವೀಕೃತಗೊಂಡಿದ್ದರೆ, ಔರಾದ್ (ಬಿ) ಕ್ಷೇತ್ರದಲ್ಲಿ 1,69,421 ನಮೂನೆಗಳನ್ನು ವಿತರಿಸಿ 13,599 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿ 10,12,274 ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದುವರೆಗೆ 1,28,052 ಅರ್ಜಿಗಳು ಸ್ವೀಕೃತಗೊಂಡಿವೆ ಎಂದು ಚುನಾವಣಾ ತಹಸೀಲ್ದಾರ್ ತಿಳಿಸಿದ್ದಾರೆ. ಸಾರ್ವಜನಿಕರ ಮಾಹಿತಿಗಾಗಿ ಈ ವಿವರಗಳನ್ನು ಪ್ರಕಟಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News