×
Ad

ಬೀದರ್ ಜಿಲ್ಲೆಯಲ್ಲಿ ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರಕ್ಕೆ ವಿಶೇಷ ಕೌಂಟರ್ ಆರಂಭ

Update: 2026-07-09 18:10 IST

ಬೀದರ್‌ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಬೀದರ್ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ವಿತರಣೆಗೆ ವಿಶೇಷ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೀರಿಶ್‌ ಬದೋಲೆ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 181 ಗ್ರಾಮ ಪಂಚಾಯಿತಿಗಳಲ್ಲಿ ಈ ಸೇವೆ ಲಭ್ಯವಿದ್ದು, ಔರಾದ್(ಬಿ) 21, ಬಸವಕಲ್ಯಾಣ 30, ಭಾಲ್ಕಿ 40, ಬೀದರ್ 32, ಹುಮನಾಬಾದ್ 19, ಹುಲಸೂರ್‌ 7, ಚಿಟಗುಪ್ಪಾ 14 ಹಾಗೂ ಕಮಲನಗರ್‌ 18 ಗ್ರಾಮ ಪಂಚಾಯಿತಿಗಳು ಒಳಗೊಂಡಿವೆ. ಇಲ್ಲಿವರೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ 201 ಅರ್ಜಿಗಳು ಸ್ವೀಕರಿಸಲ್ಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳು ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳನ್ನು ನಿರ್ವಹಿಸುತ್ತಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದರ ಮೇಲ್ವಿಚಾರಣೆ ವಹಿಸುತ್ತಾರೆ. ಸಾರ್ವಜನಿಕರು ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಪಡೆಯಲು ತಮ್ಮ ಗ್ರಾಮ ಪಂಚಾಯತ್‌ಗಳಲ್ಲಿ ತೆರೆಯಲಾಗಿರುವ ಈ ಕೌಂಟರ್‌ಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ: 82775 06000 ಗೆ ಸಂಪರ್ಕಿಸಲು ಅವರು ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News