ಬೀದರ್‌ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

Update: 2026-08-06 19:49 IST

ಬೀದರ್‌ : ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ‌ ಕೇಶವಪ್ರಸಾದ್ ಕೆ.ಎಚ್‌ ಅವರು ಆದೇಶ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯ ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಬೀದರ್‌ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಬೀದರ್‌ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ್‌ ಕರಾಳೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಸುರೇಖಾ ಅವರು ಬೀದರ್‌ ವಿಶ್ವವಿದ್ಯಾಲಯದ ಕುಲ ಸಚಿವೆಯಾಗಿ ಕೂಡ ಕೆಲಸ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News