ಶಿಕ್ಷಕರ ಕ್ಷೇತ್ರ ಚುನಾವಣೆ: ಬೀದರ್ನಲ್ಲಿ ಎಂಸಿಎಂಸಿ ಸಮಿತಿ ರಚನೆ, ಅಧಿಕಾರಿಗಳ ನೇಮಕ
ಶಿಲ್ಪಾ ಶರ್ಮಾ
ಬೀದರ್: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆ–2026ರ ಹಿನ್ನೆಲೆಯಲ್ಲಿ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ (ಎಂಸಿಎಂಸಿ)ಯಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.
ನೇಮಕಗೊಂಡ ನೋಡಲ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿವರ :
ಬೀದರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯ (ಎಂಸಿಎಂಸಿ) ನೋಡಲ್ ಅಧಿಕಾರಿಯಾಗಿ ಮಂಜುನಾಥ್ ಸುಳ್ಳೊಳ್ಳಿ(ಮೊ.ನಂ. 9632511437), ಬೀದರ್ ಜಿಲ್ಲಾ ಪಂಚಾಯತ್ ಪ್ರಥಮ ದರ್ಜೆ ಸಹಾಯಕ ವಿಜಯಕುಮಾರ್ (ಮೊ.ನಂ. 9916268750), ಬೀದರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿನಿಚಾಲಕ ಸುರೇಶ್ ಅಂಬಿಗರ್ (ಮೊ.ನಂ. 8660068406), ಬೀದರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆರಳಚ್ಚುಗಾರ ಭೀಮಣ್ಣ ನಾಯಕ್ (ಮೊ.ನಂ. 9980135288), ಬೀದರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಆಶೀಶ್ ಹಜಾರೆ (ಮೊ.ನಂ. 8861111083) ಅವರು ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳಾಗಿದ್ದಾರೆ.
ನೇಮಕಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕರ್ತವ್ಯ ವಹಿಸಲಾಗಿರುವುದರಿಂದ ಶಿಸ್ತುಬದ್ಧವಾಗಿ ಹಾಗೂ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ರಜೆ ಪಡೆಯುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ–1951ರ ಅನ್ವಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇದಲ್ಲದೆ, ನೇಮಕಗೊಂಡ ಅಧಿಕಾರಿಗಳು ವರ್ಗಾವಣೆ ಅಥವಾ ಇತರ ಕಾರಣಗಳಿಂದ ಅನುಪಸ್ಥಿತರಾದಲ್ಲಿ, ಆ ಹುದ್ದೆಗೆ ಬರುವ ಹೊಸ ಅಧಿಕಾರಿಗಳು ಇದೇ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶದಲ್ಲಿ ತಿಳಿಸಿದ್ದಾರೆ.