×
Ad

ಪೌರ ಕಾರ್ಮಿಕರ ಸೇವೆ ಅಪ್ರತಿಮ : ಸಚಿವ ಈಶ್ವರ್ ಖಂಡ್ರೆ

Update: 2025-09-23 19:35 IST

ಬೀದರ್ : ಸಮಾಜದ ಸ್ವಚ್ಛತೆ, ಆರೋಗ್ಯ ಹಾಗೂ ಸುಂದರತೆಯ ಹಿತದೃಷ್ಟಿಯಿಂದ ಪ್ರತಿದಿನ ದುಡಿಯುತ್ತಿರುವ ಪೌರ ಕಾರ್ಮಿಕರ ಸೇವೆ ಅಪ್ರತಿಮ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.

ಮಂಗಳವಾರ ಭಾಲ್ಕಿ ಪುರಸಭೆಯಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದ ನೆಲೆಯಾದ ಈ ಪರಿಶ್ರಮಿ ಕಾರ್ಮಿಕರ ಪರಿಶ್ರಮವಿಲ್ಲದೆ ಸುಂದರ ಹಾಗೂ ಆರೋಗ್ಯಕರ ಸಮಾಜ ಸಾಧ್ಯವಿಲ್ಲ. ಪೌರ ಕಾರ್ಮಿಕರ ಕಲ್ಯಾಣ, ಗೌರವ ಮತ್ತು ಭದ್ರತೆಗಾಗಿ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಅವರ ಜೀವನಮಟ್ಟ ಸುಧಾರಣೆಗೆ ನೂತನ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ನಿರಂತರವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಕಾರ್ಮಿಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News