×
Ad

ವೀರಭದ್ರೇಶ್ವರ ಜಾತ್ರಾ ಮಹೋತ್ಸವ| ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಡಾ. ಸಿದ್ದು ಪಾಟೀಲ್ ಸೂಚನೆ

Update: 2026-01-20 20:28 IST

ಹುಮನಾಬಾದ್ : ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಎಲ್ಲ ಮೂಲ ಸೌಕರ್ಯಗಳು ಒದಗಿಸಬೇಕು ಎಂದು ಶಾಸಕ ಡಾ. ಸಿದ್ದು ಪಾಟೀಲ್ ಅವರು ತಿಳಿಸಿದರು.

2026ನೇ ಸಾಲಿನ ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಸಿದ್ದು ಪಾಟೀಲ್, ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನಡೆಯುತ್ತಿದ್ದು, ಈ ಜಾತ್ರೆಗೆ ಅಂಧ್ರಪ್ರದೇಶ , ತೆಲಂಗಾಣ , ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಿಂದ ಲಕ್ಷಾದೋಪದಿ ಸಂಖ್ಯೆಗಳಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಅವರಿಗೆ ಮೂಲ ಸೌಕರ್ಯ ಒದಗಿಸುವ ಮೂಲಕ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಸಮಸ್ಯೆ ಎದುರಾಗಬಾರದು. ವಿದ್ಯುತ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಹಾಗೆಯೇ ಆರೋಗ್ಯ ಇಲಾಖೆಯವರು ಪಟ್ಟಣದ ಕೆಲವು ಕಡೆಗೆ ಆರೋಗ್ಯ ತಪಾಸಣೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಹೇಳಿದರು.

ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತರಕರ ಘಟನೆ ಹಾಗೂ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಅಂಜುಮ್ ತಬ್ಬಸುಮ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ದೀಪಿಕಾ ನಾಯ್ಕರ್, ಪುರಸಭೆ ಮುಖ್ಯಾಧಿಕಾರಿ ವನಿತಾಬಾಯಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶಿವಕುಮಾರ್, ಲೋಕಪಯೋಗಿ ಎಇಇ ವೆಂಕಟೇಶ್ ಹಾಗೂ ಜೇಸ್ಕಾಂ ಅಧಿಕಾರಿ, ಪೊಲೀಸ್, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News