×
Ad

ಎಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿ ವಿಸ್ಡ್ಂ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ : ಮಹಮ್ಮದ್ ಆಸಿಫೊದ್ದೀನ್

Update: 2025-05-08 21:21 IST

ಬೀದರ್: ಎಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿ ವಿಸ್ಡ್ಂ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ಶುಲ್ಕ ವಿನಾಯಿತಿ ನೀಡಲಾಗುವುದು. ಒಟ್ಟು ಶುಲ್ಕ ವಿನಾಯಿತಿಯ ಮೊತ್ತ 1 ಕೋಟಿ ರೂ. ಇರಲಿದೆ ಎಂದು ಕಾಲೇಜಿನ ಅಧ್ಯಕ್ಷ ಮುಹಮ್ಮದ್ ಆಸಿಫೊದ್ದೀನ್ ಹೇಳಿದ್ದಾರೆ.

ನಗರದ ಉರ್ದು ಹಾಲ್‍ ನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಸ್ಡ್ಂ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುವುದು. ಕಾಲೇಜಿನಲ್ಲಿ ಪ್ರವೇಶ ಪಡೆಯುವ 400 ವಿದ್ಯಾರ್ಥಿಗಳಿಗೆ ಶುಲ್ಕ ರಿಯಾಯಿತಿ ರೂಪದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಅವರು ತಿಳಿಸಿದರು.

ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 95 ಕ್ಕೂ ಅಧಿಕ ಅಂಕ ಗಳಿಸಿದ 100 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ.75, ಹಾಸ್ಟೆಲ್ ಶುಲ್ಕದಲ್ಲಿ ಶೇ. 50, ಶೇ. 85ಕ್ಕೂ ಹೆಚ್ಚು ಅಂಕ ಪಡೆದ 100 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ. 35, ಹಾಸ್ಟೆಲ್ ಶುಲ್ಕದಲ್ಲಿ ಶೇ.25 ಹಾಗೂ ಶೇ. 75ಕ್ಕೂ ಅಧಿಕ ಅಂಕ ಗಳಿಸಿದ 200 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ. 25 ಮತ್ತು ಹಾಸ್ಟೆಲ್ ಶುಲ್ಕದಲ್ಲಿ ಶೇ. 10 ರಷ್ಟು ರಿಯಾಯಿತಿ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ವಿಸ್ಡ್ಂ ಕಾಲೇಜು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತ ಬಂದಿದೆ. ಜಿಲ್ಲೆಯ ಫಲಿತಾಂಶ ಸುಧಾರಣೆಗೂ ಕೂಡ ಕೊಡುಗೆ ನೀಡುತ್ತಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಉಚಿತ ತರಬೇತಿ ಆರಂಭಿಸಿದ್ದು, ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿಸ್ಡ್ಂ ಆಂಗ್ಲಮಾಧ್ಯಮ ಪ್ರೌಢಶಾಲೆ, ಅಸ್ರಾ ಪ್ರೌಢಶಾಲೆ, ಎಂಬೆಸಿ ಪ್ರೌಢಶಾಲೆ, ರೋಜಾ ಮಿಷನ್ ಪ್ರೌಢಶಾಲೆ ಹಾಗೂ ಒಯಿಸ್ಟಿರ್ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಸದಸ್ಯೆ ಚೇತನಾ ಮೋಹನ್, ಕಾಲೇಜಿನ ಕಾರ್ಯದರ್ಶಿ ಮಹಮ್ಮದ್ ಸಲಾವುದ್ದೀನ್ ಹಾಗೂ ಪ್ರಾಚಾರ್ಯ ಶೇಕ್ ಮದಾರ್ ಸೇರಿದಂತೆ ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News