Bidar | ಕೆ-ಸೆಟ್ ಪರೀಕ್ಷೆಯಲ್ಲಿ ವಿಸ್ಡ್ಂ ಪಿಯು ಕಾಲೇಜು ಅತ್ಯುತ್ತಮ ಸಾಧನೆ
Update: 2026-06-11 21:37 IST
ಬೀದರ್: 2026ನೇ ಸಾಲಿನ ಕೆ- ಸೆಟ್ ಪರೀಕ್ಷೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಸ್ಡ್ಂ ಪಿಯು ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿದ್ದು, ಕೆ-ಸೆಟ್ ಪರೀಕ್ಷೆಯಲ್ಲಿ ಗಮನಾರ್ಹ ಫಲಿತಾಂಶ ದಾಖಲಿಸಿದ್ದಾರೆ ಎಂದು ವಿಸ್ಡ್ಂ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಆಸಿಫುದ್ದಿನ್ ಮತ್ತು ಕಾರ್ಯದರ್ಶಿ ಮುಹಮ್ಮದ್ ಸಲಾಹುದ್ದಿನ್ ಫರ್ಹಾನ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹುಮಾ ನಶ್ರಾ 2183, ಹುರೈನ್ ಜಮಾ 2685 ಮತ್ತು ಮುಹಮ್ಮದ್ ಶಾಕಿರ್ 7975 ನೇ ರ‍್ಯಾಂಕ್ ಪಡೆದಿದ್ದಾರೆ. ಹಾಗೆಯೇ ವಿರೇಂದ್ರ, ಭುವನೇಶ್ವರಿ, ಕೃಷ್ಣ ಮತ್ತು ದರ್ಶನ್ ಸೇರಿದಂತೆ ಇತರ ಅನೇಕ ವಿದ್ಯಾರ್ಥಿಗಳು ಸಹ ಪ್ರಶಂಸನೀಯ ರ‍್ಯಾಂಕ್ ಪಡೆದು ಪ್ರತಿಷ್ಠಿತ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಿಸ್ಡ್ಂ ಪಿಯು ಕಾಲೇಜು ಸ್ಪರ್ಧಾತ್ಮಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.