×
Ad

ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಕ್ರೀಡಾ ಕ್ಷೇತ್ರದಲ್ಲೂ ಸಾಬೀತುಪಡಿಸಿದ್ದಾರೆ : ಸಚಿವ ಈಶ್ವರ್ ಖಂಡ್ರೆ

Update: 2025-03-02 15:43 IST

ಬೀದರ್ : ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಹಿಂದೆ ಇಲ್ಲ. ಅವರು ತಮ್ಮ ಸಾಮರ್ಥ್ಯವನ್ನು ಕ್ರೀಡಾ ಕ್ಷೇತ್ರದಲ್ಲೂ ಸಾಬೀತುಪಡಿಸಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಕ್ರೀಡೆ ಭಾವೈಕ್ಯತೆ ತರುವುದರ ಜೊತೆಗೆ ಶಾರೀರಿಕ ಮತ್ತು ಮಾನಸಿಕ ಸದೃಢತೆ ನೀಡುತ್ತದೆ. ಸರ್ಕಾರ ಮಹಿಳಾ ಕ್ರೀಡಾಪಟುಗಳಿಗಾಗಿ ವಿವಿಧ ಯೋಜನೆಗಳ ಮೂಲಕ ಅವರ ಪ್ರೋತ್ಸಾಹಕ್ಕೆ ಬದ್ಧವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಅಧಿಕಾರಿ ಸೇರಿದಂತೆ ಮಹಿಳಾ ಕ್ರೀಡಾಪಟು, ಕ್ರೀಡಾ ಪ್ರೇಮಿ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News