ಬೀದರ್ | ಜೂ.15 ರಿಂದ 17 ರವರೆಗೆ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ; ನಿಷೇಧಾಜ್ಞೆ ಜಾರಿ
Update: 2025-06-14 20:20 IST
ಬೀದರ್: ಜೂ.15 ರಿಂದ 17 ರವರೆಗೆ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆಯುತ್ತಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತ ಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ.
ಸಿ.ಆರ್.ಪಿ., ಬಿ.ಆರ್.ಪಿ., ಇ.ಸಿ.ಓ., ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ತಾಂತ್ರಿಕ ಸಹಾಯಕ ಹಾಗೂ ಗ್ರೂಪ್ ಬಿ ವೃಂದದ ಸಮನಾಂತರ ಹುದ್ದೆಗಳ ಆಯ್ಕೆಗಾಗಿ ಲಿಖಿತ ಪರೀಕ್ಷೆ ನಡೆಯಬೇಕಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163(1) ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರದ ನೌಬಾದ್ ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.