×
Ad

ಪಡುಬಿದ್ರೆ | ಬೈಕ್ ಕಳವು ಪ್ರಕರಣ: ಅಂತರ್ ಜಿಲ್ಲಾ ಕಳವು ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2025-02-13 11:10 IST

ಪಡುಬಿದ್ರೆ, ಫೆ.13: ಪಡುಬಿದ್ರೆ ಬೈಕ್ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ಅಂತರ್ ಜಿಲ್ಲಾ ಬೈಕ್ ಕಳವು ಆರೋಪಿಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ವಿಚಾರಣೆ ವೇಳೆ ಪ್ರಕರಣದ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದ ಮುಹಮ್ಮದ್ ರುಹಾನ(28), ಹಾಗೂ ಶಿವಮೊಗ್ಗ ಅಶೋಕ್ ನಗರದ ತಾಜುದ್ದೀನ್ ಪಿ.ಕೆ. ಯಾನೆ ತಾಜು (28) ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಮುಹಮ್ಮದ್ ರುಹಾನ್ ವಿರುದ್ಧ ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರಕರಣ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ತಾಜುದ್ದೀನ್ ವಿರುದ್ಧ ಶಿವಮೊಗ್ಗೆ ಜಿಲ್ಲೆಯಲ್ಲಿ 8, ಹುಬ್ಬಳ್ಳಿ ಧಾರವಾಡ ನಗರದಲ್ಲಿ 5, ಹಾಸನ ಜಿಲ್ಲೆಯಲ್ಲಿ 2, ಹಾವೇರಿ ಜಿಲ್ಲೆಯಲ್ಲಿ 1 ಮತ್ತು ಬೆಂಗಳೂರು ನಗರದಲ್ಲಿ 1 ಸೇರಿದಂತೆ ಒಟ್ಟು 17 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News